top of page

ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಪೋಸ್ಟ್ ಮತ್ತು ಸುಳ್ಳು ಸುದ್ದಿ ಪ್ರಕಟಿಸುವವರ ಮೇಲೆ ನಿಗಾವಹಿಸಿ : ಗೃಹ ಸಚಿವ ಜಿ.ಪರಮೇಶ್ವರ್.

  • Writer: new waves technology
    new waves technology
  • Oct 28, 2024
  • 1 min read

ಶಿವಮೊಗ್ಗ: ನಗರದಲ್ಲಿ ಪೊಲೀಸ್ ಇಲಾಖೆಯು ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ಭವನವನ್ನು ಗೃಹ ಸಚಿವ ಜಿ.ಪರಮೇಶ್ವರ್‌ರವರು ಉದ್ಘಾಟಿಸಿದರು.









ಉದ್ಘಾಟನಾ ಕಾರ್ಯಕ್ರಮದ ಬಳಿಕ ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆ

ನೀಡಿದ್ದರೇ. ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಪಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಸೂಚಿಸಿದರು,

ಪೊಲೀಸ್ ಅಧಿಕಾರಿ ಮತ್ತು ಸಿಬ್ಬ್ಬಂದಿಗಳಮಕ್ಕಳ ಓದಿಗಾಗಿ ಗ್ರಂಥಾಲಯಗಳಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಲಿಸಬೇಕು.

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವರಿಗೆ ವಿವಿಧ ವಿಷಯಗಳ ಅವಶ್ಯಕ ಪುಸ್ತಕಗಳನ್ನು ಒದಗಿಸಿ.*ಪೊಲೀಸ್ ಇಲಾಖೆ ಸರ್ಕಾರದ ಮುಖ. ಅಧಿಕಾರಿ ಮತ್ತು ಸಿಬ್ಬಂದಿಗಳು ಚೆನ್ನಾಗಿ ಕೆಲಸ ಮಾಡಿ, ಅಪರಾಧ ಪ್ರಕರಣಗಳನ್ನು ನಿಯಂತ್ರಣಕ್ಕೆ ತಂದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ನಮ್ಮ ಇಲಾಖೆಯ ಮೇಲೆ ಹೆಚ್ಚು ಜವಾಬ್ದಾರಿ ಇದೆ.

*ಬಹುತೇಕ ಪ್ರಕರಣಗಳು ಬಂದಾಗ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಪೊಲೀಸರು ದೂರುಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಪ್ರತಿದಿನ ಸಾರ್ವಜನಿಕರು ನನ್ನ ಬಳಿಗೆ ದೂರು ತೆಗೆದುಕೊಂಡು ಬರುತ್ತಿದ್ದಾರೆ. ಇದು ಮುಂದುವರಿದರೆ ಸಹಿಸುವುದಿಲ್ಲ.

ಠಾಣೆಗೆ ಬರುವ ಜನರ ಸಮಸ್ಯೆಗಳನ್ನು ಆಲಿಸಿ, ಜನಸ್ನೇಹಿಯಾಗಿ ಕೆಲಸ ಮಾಡಬೇಕು.

*ಶಿವಮೊಗ್ಗ ಪ್ರವಾಸದೊ ಜಿಲ್ಲೆಯಾಗಿರುವುದರಿಂದ ಸಾಕಷ್ಟು ಜನರು ವಿವಿಧೆಡೆಯಿಂದ ಪ್ರವಾಸಕ್ಕೆ ಬರುತ್ತಾರೆ. ಕಿಡಿಗೇಡಿಗಳು ಪ್ರವಾಸಿಗರಿಗೆ ತೊಂದರೆ ಉಂಟು ಮಾಡುತ್ತಿರುತ್ತಾರೆ. ಈ ಬಗ್ಗೆ ಹೆಚ್ಚು ನಿಗಾವಹಿಸಿ ಬಿಸಿ ಮುಟ್ಟಿಸಬೇಕು. ವಿವಿಧ ಆಚರಣೆಗಳ ಸಂದರ್ಭದಲ್ಲಿ ವಿವಾದಾತ್ಮಕ ಪ್ಲೆಕ್ಸ್, ಬ್ಯಾನರ್‌ಗಳನ್ನು ಹಾಕುತ್ತಿದ್ದಾರೆ.

ಈ ಬಗ್ಗೆ ನಿಗಾವಹಿಸಬೇಕು. ಸಂಬಂಧಪಟ್ಟವರಿಗೆ ಎಚ್ಚರಿಸಿ ಕ್ರಮ ತೆಗೆದುಕೊಂಡರೆ ವಿವಾದಗಳು ಸೃಷ್ಟಿಯಾಗುವುದಿಲ್ಲ.

*ಸೈಬರ್ ಕೈಂ, ಡ್ರಗ್ಸ್ ಪ್ರಕರಣಗಳು ಪೊಲೀಸ್ ಇಲಾಖೆಗೆ ಸವಲಾಗಿ ಪರಿಣಮಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಿಬ್ಬಂದಿಗಳನ್ನು ನೀಡಿ ಸಿಇಎನ್ ಠಾಣೆಗಳ ಬಲವರ್ಧಿಸ ಲಾಗುವುದು. ಮಾದಕ ದ್ರವ್ಯ ವ್ಯಸನಿಗಳು ಸಿಂಥೆಟಿಕ್ ಡ್ರಗ್ ಮೊರೆ ಹೋಗುತ್ತಿದ್ದಾರೆ.

ಮೆಡಿಕಲ್‌ಗಳಲ್ಲಿ ಸಿಗುವ ಕೆಲ ಮಾತ್ರೆಗಳನ್ನು ಬಳಸುತ್ತಿದ್ದು. ಇದಕ್ಕೆ ಕಡಿವಾಣ ಹಾಕಬೇಕಿದೆ. ಅಂತಹ ಔಷಧಗಳನ್ನು ವೈದ್ಯರ ಸಲಹೆ ಇಲ್ಲದೆ ಮಾರಾಟ ಮಾರಾಟಬಾರದು.

ಈ ಸಂದರ್ಭದಲ್ಲಿ ಶಾಸಕರಾದ ಬಿ.ಕೆ.ಸಂಗಮೇಶ್ವರ, ಎಸ್.ಎನ್.ಚೆನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ವಿಧಾನಪರಿಷತ್‌ ಸದಸ್ಯರಾದ ಬಲ್ಲೀಶ್ ಭಾನು, ಡಿ.ಎಸ್.ಅರುಣ್, ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪೂರ್ವ ವಲಯ ಐಜಿಪಿ ರಮೇಶ್ ಬಾನೋತ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಅವರು ಉಪಸ್ಥಿತರಿದ್ದರು.

Comentarios


bottom of page