top of page

CM ಸಾಮಾಜಿಕ ಮಾಧ್ಯಮ ನಿರ್ವಹಣೆಗೆ 35 ಜನರ ತಂಡ; ದುಬಾರಿ ವೆಚ್ಚ, ಅಭಿವೃದ್ಧಿಗೇ ಕಾಸಿಲ್ಲ, ಇದೆಲ್ಲಾ ಬೇಕಾ- RTI ಕಾರ್ಯಕರ್ತ ಪ್ರಶ್ನೆ!

  • Writer: new waves technology
    new waves technology
  • Oct 24, 2024
  • 1 min read

ಈಗ ಸಿದ್ದರಾಮಯ್ಯ ಅವರ 2 ನೇ ಅವಧಿಯಲ್ಲಿ ಅವರ ಸರ್ಕಾರದ ಸಾಮಾಜಿಕ ಮಾಧ್ಯಮ ನಿರ್ವಹಣೆಯ ಖರ್ಚು ಹೆಚ್ಚು ಸದ್ದು ಮಾಡುತ್ತಿದೆ.










ಬೆಂಗಳೂರು: ಹಿಂದೊಮ್ಮೆ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಟೀ ಮತ್ತು ಬಿಸ್ಕೇಟ್ ಗಾಗಿ ಸಿಎಂ ಕಚೇರಿ 200 ಕೋಟಿ ರೂ ವ್ಯಯಿಸಿದ್ದು ಸುದ್ದಿಯಾಗಿತ್ತು.

ಈಗ ಸಿದ್ದರಾಮಯ್ಯ ಅವರ 2 ನೇ ಅವಧಿಯಲ್ಲಿ ಅವರ ಸರ್ಕಾರದ ಸಾಮಾಜಿಕ ಮಾಧ್ಯಮ ನಿರ್ವಹಣೆಯ ಖರ್ಚು ಹೆಚ್ಚು ಸದ್ದು ಮಾಡುತ್ತಿದೆ. ಸಿದ್ದರಾಮಯ್ಯ ಅವರ ಕಚೇರಿ ಅಧಿಕೃತ ಮತ್ತು ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ವಹಿಸಲು ತಿಂಗಳಿಗೆ ಸುಮಾರು 54 ಲಕ್ಷ ರೂಪಾಯಿಗಳನ್ನು ಖರ್ಚು ಮಾಡುತ್ತದೆ ಎಂಬುದು ಆರ್‌ಟಿಐ ಮಾಹಿತಿಯ ಮೂಲಕ ಬಹಿರಂಗವಾಗಿದೆ.

ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗುತ್ತಿರುವ ಸರ್ಕಾರ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದೇ ಪರದಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸಿಎಂ ಕಚೇರಿ ಕೇವಲ ಪ್ರಚಾರಕ್ಕಾಗಿ ಇಷ್ಟು ಮೊತ್ತದ ಹಣವನ್ನು ತಿಂಗಳಿಗೆ ಖರ್ಚು ಮಾಡುತ್ತಿರುವುದು ಆಕ್ಷೇಪಕ್ಕೆ ಗುರಿಯಾಗಿದೆ.


ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರ ಬಿಲ್ ಇತ್ಯರ್ಥ ಮಾಡಲು ಹೆಣಗಾಡುತ್ತಿದೆ. ಇಂಥ ಸಮಯದಲ್ಲಿ ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ವಹಣೆಗೆ ಭಾರಿ ವೆಚ್ಚ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಆರ್​ಟಿಐ ಅಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದೆ ಎಂದು ಆರ್‌ಟಿಐ ಕಾರ್ಯಕರ್ತ ಮಾರಲಿಂಗಗೌಡ ಮಾಲಿ ಪಾಟೀಲ್ ಟೈಮ್ಸ್ ಆಫ್ ಇಂಡಿಯಾ ಮಾಧ್ಯಮಕ್ಕೆ ತಿಳಿಸಿದ್ದಾರೆ. ಆದರೆ, ಈ ಹಿಂದಿನ ಮುಖ್ಯಮಂತ್ರಿಗಳ ಖರ್ಚಿಗೆ ಹೋಲಿಸಿದರೆ ಇದು ಕಡಿಮೆ ಎಂದು ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ, ಗ್ಯಾರಂಟಿಯಿಂದ ಆರ್ಥಿಕ ಹೊರೆ: ಆರ್ ವಿ ದೇಶಪಾಂಡೆ

ಹಿಂದಿನ ಮುಖ್ಯಮಂತ್ರಿಗಳು ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ತಿಂಗಳಿಗೆ 2 ಕೋಟಿ ರೂ. ಖರ್ಚು ಮಾಡುತ್ತಿದ್ದರು ಎಂದು CMO ಅಧಿಕಾರಿಗಳು ಹೇಳಿದ್ದಾರೆ. ಆರ್ ಟಿಐ ಮಾಹಿತಿಯ ಪ್ರಕಾರ ಸಿಎಂಒ ಕಳೆದ ವರ್ಷ ಅಕ್ಟೋಬರ್ 25 ರಿಂದ 2024ರ ಮಾರ್ಚ್ ರವರೆಗೆ ಸುಮಾರು 3 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಸಿಎಂಒ ಪ್ರತಿ ತಿಂಗಳು ಶೇ 18 ಜಿಎಸ್​​ಟಿ ಸೇರಿದಂತೆ ಸುಮಾರು 53.9 ಲಕ್ಷ ರೂ. ಪಾವತಿಸಿದೆ. ದಿ ಪಾಲಿಸಿ ಫ್ರಂಟ್ ಕಂಪನಿ ಸಿದ್ದರಾಮಯ್ಯ ಅವರ ಖಾತೆಗಳನ್ನು ನಿರ್ವಹಿಸುತ್ತಿದೆ.

Comments


bottom of page