Indian Stock Market: ಅಲ್ಪ ಕುಸಿತ, Sensex 29 ಅಂಕ ಇಳಿಕೆ
- new waves technology
- Feb 18
- 1 min read
ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.039ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.062ರಷ್ಟು ಇಳಿಕೆ ದಾಖಲಿಸಿದೆ.

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಕುಸಿತ ಮುಂದುವರೆದಿದ್ದು ಮಂಗಳವಾರ ಕೂಡ ಅಲ್ಪ ಪ್ರಮಾಣದ ಇಳಿಕೆಯೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದೆ.
ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.039ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.062ರಷ್ಟು ಇಳಿಕೆ ದಾಖಲಿಸಿದೆ.
ಸೆನ್ಸೆಕ್ಸ್ ಇಂದು 29.47 ಅಂಕಗಳ ಇಳಿಕೆಯೊಂದಿಗೆ 75,967.39 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 14.20 ಅಂಕಗಳ ಕುಸಿತದೊಂದಿಗೆ 22,945.30 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ವಿದೇಶಿ ನಿಧಿಯ ನಿರಂತರ ಹೊರಹರಿವು ಮತ್ತು ಕಾರ್ಪೊರೇಟ್ ಗಳಿಕೆಯಲ್ಲಿನ ನಿಧಾನಗತಿಯು ಹೂಡಿಕೆದಾರರ ಭಾವನೆಗಳ ಮೇಲೆ ಪರಿಣಾಮ ಬೀರಿದ್ದರಿಂದ ಮಂಗಳವಾರ ಬೆಂಚ್‌ಮಾರ್ಕ್ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸ್ವಲ್ಪ ಕುಸಿತದೊಂದಿಗೆ ಕೊನೆಗೊಂಡವು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಎನ್‌ಟಿಪಿಸಿ, ಜೊಮಾಟೊ, ಟೆಕ್ ಮಹೀಂದ್ರಾ, ಪವರ್ ಗ್ರಿಡ್, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಎಚ್‌ಸಿಎಲ್ ಟೆಕ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಇಂಡಸ್‌ಇಂಡ್ ಬ್ಯಾಂಕ್, ಮಹೀಂದ್ರಾ & ಮಹೀಂದ್ರಾ, ಅಲ್ಟ್ರಾಟೆಕ್ ಸಿಮೆಂಟ್, ಹಿಂದೂಸ್ತಾನ್ ಯೂನಿಲಿವರ್, ಸನ್ ಫಾರ್ಮಾ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಐಟಿಸಿ ಮತ್ತು ಏಷ್ಯನ್ ಪೇಂಟ್ಸ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
Comments