ಕುಸಿತದ ಹಾದಿ ಹಿಡಿದಿದ್ದ ಭಾರತೀಯ ಷೇರುಮಾರುಕಟ್ಟೆ ತನ್ನ ಕುಸಿತಕ್ಕೆ ಕೊನೆಗೂ ಬ್ರೇಕ್ ಹಾಕಿದ್ದು ಮಂಗಳವಾರ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಮುಂಬೈ: ಈ ವಾರದ ಆರಂಭದಲ್ಲೇ ಕುಸಿತ ಹಾದಿ ಹಿಡಿದಿದ್ದ ಭಾರತೀಯ ಷೇರುಮಾರುಕಟ್ಟೆ ತನ್ನ ಕುಸಿತೃಕ್ಕೆ ಕೊನೆಗೂ ಬ್ರೇಕ್ ಹಾಕಿದ್ದು, ಮಂಗಳವಾರ ಚೇತೋಹಾರಿ ವಹಿವಾಟಿನೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದೆ.
ಹೌದು.. ಕುಸಿತದ ಹಾದಿ ಹಿಡಿದಿದ್ದ ಭಾರತೀಯ ಷೇರುಮಾರುಕಟ್ಟೆ ತನ್ನ ಕುಸಿತಕ್ಕೆ ಕೊನೆಗೂ ಬ್ರೇಕ್ ಹಾಕಿದ್ದು ಮಂಗಳವಾರ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.30ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.39ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 234.12 ಅಂಕಗಳ ಏರಿಕೆಯೊಂದಿಗೆ 78,199.11 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 91.85 ಅಂಕಗಳ ಏರಿಕೆಯೊಂದಿಗೆ 23,707.90 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ತೈಲ, ಅನಿಲ, ಇಂಧನ ವಲಯದ ಷೇರುಗಳ ಮೌಲ್ಯದಲ್ಲಿ ಏರಿಕೆ ಕಂಡುಬಂದಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಎಚ್‌ಸಿಎಲ್ ಟೆಕ್, ಟಿಸಿಎಸ್, ಐಷರ್ ಮೋಟಾರ್ಸ್, ಹೀರೋ ಮೋಟೋಕಾರ್ಪ್, ಟ್ರೆಂಟ್ ಸಂಸ್ಥೆಯ ಷೇರುಗಳು ನಷ್ಟ ಕಂಡಿದೆ.
ಅಂತೆಯೇ ONGC, SBI ಜೀವ ವಿಮೆ, ಟಾಟಾ ಮೋಟಾರ್ಸ್, HDFC ಲೈಫ್, ಅದಾನಿ ಎಂಟರ್‌ಪ್ರೈಸಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿವೆ.
Commentaires