ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋ ಚಾಲಕ ವಿಜಯ್ ಕುಮಾರ್(50) ಹಾಗೂ ಪ್ರಯಾಣಿಕ ವಿಷ್ಣು ಬಾಟಿಯ(70) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು: ಬೆಂಗಳೂರಿನ ಹನುಮಂತನಗರದ ಸೀತಾ ಸರ್ಕಲ್ ಬಳಿ ಶುಕ್ರವಾರ ಎರಡು ಬಿಎಂಟಿಸಿ ಬಸ್ ಗಳ ಮಧ್ಯೆ ಸಿಲುಕು ಆಟೋ ಅಪ್ಪಚ್ಚಿಯಾಗಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋ ಚಾಲಕ ವಿಜಯ್ ಕುಮಾರ್(50) ಹಾಗೂ ಪ್ರಯಾಣಿಕ ವಿಷ್ಣು ಬಾಟಿಯ(70) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಂದೆ ಇದ್ದ ಬಿಎಂಟಿಸಿ ಬಸ್ ಚಾಲಕ ದಿಢೀರ್ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಆಟೋ ಬಸ್ ಡಿಕ್ಕಿ ಹೊಡೆದಿದೆ. ಅದೇ ವೇಳೆ ಹಿಂದೆ ಬರುತ್ತಿದ್ದ ಮತ್ತೊಂದು ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಬಸ್‌ಗಳ ಮಧ್ಯೆ ಆಟೋ ಸಿಲುಕಿ ಅಪ್ಪಚ್ಚಿಯಾಗಿ ಚಾಲಕ ಹಾಗೂ ಪ್ರಯಾಣಿಕ ಮೃತಪಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿ ಆಟೋದಲ್ಲಿ ಸಿಲುಕಿಗೊಂಡಿದ್ದ ಇಬ್ಬರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬನಶಂಕರಿ ಸಂಚಾರಿ ಪೊಲೀಸರು, ಬಿಎಂಟಿಸಿ ಬಸ್ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Comments