ಬೆಂಗಳೂರು: 5ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ
- new waves technology
- Apr 14
- 1 min read
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ.

ಬೆಂಗಳೂರು: ಪರೀಕ್ಷೆಯ ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ. ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ.
ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.
Комментарии