ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯದ ಪೋಸ್ಟ್ ಮಾಡಿದ್ದಕ್ಕೆ FIR: ಬಿಜೆಪಿ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಾರ್ಯಕರ್ತ!
- new waves technology
- Apr 4
- 1 min read
ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ

ಬೆಂಗಳೂರು: ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಾಗವಾರದ ಕಚೇರಿಯಲ್ಲಿಯೇ ವಿನಯ್ ಸೋಮಯ್ಯ ನೇಣಿಗೆ ಶರಣಾಗಿದ್ದಾರೆ.
ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ. ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ, ವಿನಯ್ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಬಂಧನವಾಗಿತ್ತು. ಇದರಿಂದ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನಯೇ ಸೋಮಯ್ಯ ಬರೆದಿರುವ ಡೆತ್ ನೋಟನ್ನು ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Comments