top of page

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಸುಟ್ಟು ಬೂದಿಯಾಗ್ತಾರೆ: ಸಚಿವ ಜಮೀರ್ ಅಹ್ಮದ್

Writer: new waves technologynew waves technology

ಅಧಿಕಾರ ಹಂಚಿಕೆ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಸಂದರ್ಭದಲ್ಲೇ ಜಮೀರ್ ಅಹ್ಮದ್ ಖಾನ್ ಅವರು ರೋಷಾವೇಶದಿಂದ ಮಾತನಾಡಿದ್ದಾರೆ.

ಬಳ್ಳಾರಿ: ರಾಜ್ಯ ಕಾಂಗ್ರೆಸ್‌ನಲ್ಲಿ ಪಕ್ಷದೊಳಗಿನ ಆಂತರಿಕ ಕಲಹದ ನಡುವೆ, ವಸತಿ ಮತ್ತು ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟಲು ಧೈರ್ಯ ಮಾಡುವವರು ಸುಟ್ಟು ಬೂದಿಯಾಗುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಧಿಕಾರ ಹಂಚಿಕೆ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಯ ಮಧ್ಯೆ ಜಮೀರ್ ಅಹ್ಮದ್ ಖಾನ್ ಅವರು ರೋಷಾವೇಶದಿಂದ ಮಾತನಾಡಿದ್ದಾರೆ.

ಸಚಿವ ಜಮೀರ್ ಅಹ್ಮದ್ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿರುವುದರಿಂದ, ಈ ಹೇಳಿಕೆ ಉಪಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ನೀಡಲಾಗಿದೆ ಎಂದು ಪಕ್ಷದ ಒಳಗಿನವರು ಹೇಳುತ್ತಿದ್ದಾರೆ.


ಇಂದು ಹಂಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ. ಸಿಎಂ ಸ್ಥಾನ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿಕೆ ಶಿವಕುಮಾರ್ ಇದ್ದಾರೆ, ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದು ಹೇಳಿದರು.

ಸಿಎಂ ಕುರ್ಚಿ ಖಾಲಿ ಇದ್ರೆ ತಾನೇ ಬದಲಾವಣೆಯ ಚರ್ಚೆ ಬರಬೇಕು, ಸಿಎಂ ಸಿದ್ದರಾಮಯ್ಯ ಕುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ? ಅದೊಂಥರ ಬೆಂಕಿ ಅದು, ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲಾ, ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತಿವಿ ಎಂದರು.

ನಮ್ಮ ಪಕ್ಷ ಹೈಕಮಾಂಡ್ ಪಕ್ಷ, ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ. ಹೈಕಮಾಂಡ್‌ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ ನಾವು ಅಭಿಪ್ರಾಯ ತಿಳಿಸಬಹುದು. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದರು.

ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಮಾಡಲಿ ಎಂದು ಹೇಳಿಲ್ಲ. ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರುತ್ತದೆ.ದಲಿತ, ಅಲ್ಪಸಂಖ್ಯಾತ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ. ತೀರ್ಮಾನ ಹೈ ಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.

Comments


bottom of page